ರಕ್ತಚಂದನ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ !

Kannada News

26-07-2017

ಬೆಂಗಳೂರು: ರಕ್ತಚಂದನದ ಮರದ ತುಂಡುಗಳನ್ನು ಮಾರಾಟ ಮಾಡುತ್ತಿದ್ದ ತಮಿಳುನಾಡಿನ ಇಬ್ಬರು ಖತರ್ನಾಕ್ ಆರೋಪಿಗಳನ್ನು ಬಸವನಗುಡಿ ಪೊಲೀಸರು ಬಂಧಿಸಿ 11 ರಕ್ತಚಂದನದ ಮರದ ತುಂಡುಗಳನ್ನು ವಶಪಡಿಸಿಕೊಂಡಿದ್ದಾರೆ.

ತಮಿಳುನಾಡಿನ ಮಲ್ಲವಾಡಿಯ ತಿರುಪತಿ (33), ವಾಣಂಬಾಡಿಯ ರಾಜೇಂದ್ರನ್ (47) ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 5 ಲಕ್ಷ ಮೌಲ್ಯದ 398 ಕೆ.ಜಿ ತೂಕದ 11 ರಕ್ತಚಂದನ ಮರದ ತುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನಗರಕ್ಕೆ ಟಾಟಾ ಸುಮೊದಲ್ಲಿ ರಕ್ತಚಂದನದ ಮರದ ತುಂಡುಗಳನ್ನು ತಂದು ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಕಾರ್ಯಾಚರಣೆ ನಡೆಸಿದ ಬಸವನಗುಡಿ ಪೊಲೀಸ್ ಇನ್ಸ್ ಪೆಕ್ಟರ್ ಶಶಿದರ್ ಮತ್ತವರ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ