ಆಕಸ್ಮಿಕ ಬೆಂಕಿ ಸುಟ್ಟು ಕರಕಲಾದ ಲಾರಿ !

Kannada News

27-07-2017

ಮೈಸೂರು: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಜೋಳ ಸೇರಿದಂತೆ, ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ. ಘಟನೆಯು ಮೈಸೂರು ಜಿಲ್ಲೆ ನಂಜನಗೂಡು, ತಾಲ್ಲೂಕಿನ ಕವಲಂದೆ ಗ್ರಾಮದ ಬಳಿ ನಡೆದಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ಜೋಳ ಬೆಂಕಿಗಾಹುತಿಯಾಗಿದೆ. ಮಂಜುನಾಥ್ ಮತ್ತು ಜಗದೀಶ್ ಎಂಬುವರಿಗೆ ಸೇರಿದ ಜೋಳ, ಸುಮಾರು 8 ಲಕ್ಷ ರೂಪಾಯಿ ಮೌಲ್ಯದ್ದಾಗಿದ್ದು, ರೈತರು ಕಂಗಾಲಾಗಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ