ಅತಿಯಾದ ಮದ್ಯ ಸೇವನೆ ಇಬ್ಬರ ಬಲಿ !

Kannada News

27-07-2017

ಕೋಲಾರ: ಅತಿಯಾದ ಮಧ್ಯ ಸೇವನೆಯಿಂದ ಇಬ್ಬರು ಸಾವನ್ನಪ್ಪಿರುವ ಘಟನೆಯು, ಕೊಲಾರದ, ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಮಾಸ್ತಿ ವೃತ್ತದಲ್ಲಿ ಇಬ್ಬರ ಶವ ಪತ್ತೆಯಾಗಿದ್ದೂ, ಗೋಪಾಲ್ (೪೦) ರಾಜಪ್ಪ (೪೪) ಎಂದು ಮೃತರನ್ನು ಗುರುತಿಸಲಾಗಿದೆ. ಚಿಂದಿ ಆಯ್ದುಕೊಂಡು ಜೀವನ ಸಾಗಿಸುತ್ತಿದ್ದ ಇವರು, ಮಾಲೂರು ಪಟ್ಟಣದ ಸಮತಾ ನಗರದ ನಿವಾಸಿಗಳು ಎಂದು ತಿಳಿದು ಬಂದಿದೆ. ಚಿಂದಿ ಆಯ್ದು ಜೀವನ ನಡೆಸುತ್ತಿದ್ದ ಇವರು ಕುಡಿತಕ್ಕೆ ದಾಸರಾಗಿದ್ದೂ, ಅತಿಯಾಗಿ ಮದ್ಯ ಸೇವಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಅತಿಯಾದ ಮದ್ಯ ಸೇವನೆಯೇ ಸಾವಿಗೆ ಕಾರಣ ಎಂದು ಶಂಕೆ ವ್ಯಕ್ತವಾಗಿದ್ದೂ, ಸ್ಥಳಕ್ಕೆ ಮಾಲೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ