ಹುಬ್ಬಳ್ಳಿ ಮೇಯರ್‌ಗೆ ಅವಮಾನ...?

Kannada News

27-07-2017

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದ ಪಾಲಿಕೆಯ ಮೇಯರ್ ಡಿ.ಕೆ.ಚವ್ಹಾಣ ಅವರಿಗೆ ಅವಮಾನ ಮಾಡಿದ್ದಾರೆಂದು ಸ್ವತಹ ಅವರೇ, ಪೊಲೀಸ್ ಮತ್ತು ಜಿಲ್ಲಾಧಿಕಾರಿಗಳ ವಿರುದ್ದ ಕಿಡಿಕಾರಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರ ಕೈಗೊಂಬೆಯಂತೆ ಪೊಲೀಸ್ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ನಡೆದುಕೊಳ್ಳುತ್ತಿದ್ದಾರೆಂದು ನೇರವಾಗಿ ಆರೋಪಿಸಿದ್ದಾರೆ. ಹುಬ್ಬಳ್ಳಿಗೆ ಸಿಎಂ ಸಿದ್ದರಾಮಯ್ಯ ನವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಸಿಎಂ ರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ, ಈ ವೇಳೆ ಪ್ರವೇಶ ನಿರಾಕರಿಸಿದ್ದರಿಂದ ಕೆರಳಿದ ಅವರು, ನಂತರ ಮಾಧ್ಯಮ ಪ್ರತಿನಿಧಿಗಳ ಬಳಿ ಬಂದು ಅಳಲು ತೊಡಿಕೊಂಡಿದ್ದಾರೆ. ಇದೇನು  ಮೊದಲು ಬಾರಿ ಅಲ್ಲಾ ಈ ಹಿಂದೆಯು ಸಹ ಹಲವಾರು ಸಲ ನನಗೆ ಅವಮಾನ ಮಾಡಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ವಿಮಾನ ನಿಲ್ದಾಣದ ಒಳಗಡೆ ಕಾಂಗ್ರೆಸ್ ಕಾರ್ಯಕರ್ಯತರನ್ನು ಬಿಟ್ಟಿದ್ದಾರೆ, ಆದರೆ ವಿಮಾನ ನಿಲ್ದಾಣ ಒಳಗಡೆ ಹೋಗಲು ನನಗೆ ಅಧಿಕಾರಿಗಳು ಅವಕಾಶ ನೀಡಿಲ್ಲವೆಂದು ಗರಂ ಆದರು.

  ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ