ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ !

Kannada News

27-07-2017

ಮಂಡ್ಯ: ಮಂಡ್ಯದ ನಂಜಾಪುರ ಏತ ನೀರಾವರಿ ಯೋಜನೆಯನ್ನು ಸದ್ಬಳಕೆ ಮಾಡಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ ಕಬ್ಬು ಬೆಳೆಗಾರರ ಸಂಘ ಮತ್ತು ರೈತರು, ನೀರಾವರಿ ಇಲಾಖೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕಲ್ಕುಣಿ ಗ್ರಾಮದ, ನಂಜಾಪುರ ಏತ ನೀರಾವರಿ ಯೋಜನೆಗೆ ರೈತರು ಆಗ್ರಹಿಸಿದ್ದಾರೆ. ನೀರಾವರಿ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದ ನೀರಾವರಿ ಯೋಜನೆ ಸದ್ಬಳಕೆಯಾಗುತ್ತಿಲ್ಲ ಎಂದು ಆರೋಪಿಸಿದ ರೈತರು, ಗ್ರಾಮದಲ್ಲಿರುವ ಕಾವೇರಿ ನೀರಾವರಿ ನಿಗಮ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದಾರೆ. ಬನ್ನೂರು, ಟಿ.ನರಸೀಪುರ ವ್ಯಾಪ್ತಿಗೆ ನೀರೊದಗಿಸುವ ಯೋಜನೆ ಇದಾಗಿದ್ದೂ, ಕೂಡಲೆ ಈ ಕುರಿತು ಕ್ರಮ ಕೈಗೊಳ್ಳುವಂತೆ ರೈತರು ಒತ್ತಾಯಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ