ಧರಂ ಸಿಂಗ್: ಅಂತಿಮ ದರ್ಶನಕ್ಕೆ ಅಭಿಮಾನಿಗಳ ದಂಡು !

Kannada News

28-07-2017

ತೀವ್ರ ಅನಾರೋಗ್ಯದ ಕಾರಣ ಸಾವನ್ನಪ್ಪಿರುವ ಮಾಜಿ ಮುಖ್ಯ ಮಂತ್ರಿ ಧರಂ ಸಿಂಗ್ ಅವರ ಪಾರ್ಥಿವ ಶರೀರವನ್ನು, ಕಲಬುರಗಿ ನಗರದ ಎನ್.ವಿ ಕಾಲೇಜು ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗಿದೆ. ಅಭಿಮಾನಿಗಳು, ರಾಜಕೀಯ ಮುಖಂಡರು ಸೇರಿದಂತೆ,  ಸಾರ್ವಜನಿಕರು ಸಾಲುಗಟ್ಟಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಡಾ.ಶರಣಪ್ರಕಾಶ ಪಾಟೀಲ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ ಅಂತಿಮ ದರ್ಶನ ಪಡೆದರು. ಧರಂ ಸಿಂಗ್ ಪುತ್ರರಾದ ಅಜಯಸಿಂಗ್, ವಿಜಯಸಿಂಗ್, ಪತ್ನಿ ಪ್ರಭಾವತಿ, ಸ್ಥಳದಲ್ಲಿ ಉಪಸ್ಥಿತರಿದ್ದರು. ಧರಂ ಸಿಂಗ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇಂದು ಕಲಬುರಗಿಯ ನಾಗನಹಳ್ಳಿಯಲ್ಲಿರುವ ಅವರ ತೋಟದಲ್ಲಿ ಸಂಜೆ ಸರ್ಕಾರಿ ಗೌರವಗಳೊಂದಿಗೆ ಧರಂಸಿಂಗ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ