ಹಿಂದಿ ಹೇರಿಕೆ ವಿರೋಧಿಸಿ ಪ್ರತಿಭಟನೆ !

Kannada News

28-07-2017

ಮಂಡ್ಯ: ಹಿಂದಿ ಹೇರಿಕೆ ವಿರುದ್ಧ ಬೆಂಗಳೂರಿನಲ್ಲಿ ಸಾಕಷ್ಟು ಹೋರಾಟಗಳು, ತೀವ್ರ ತರವಾದ ಪ್ರತಿಭಟನೆಗಳು ನಡೆದ ಬೆನ್ನಲ್ಲೇ, ಮಂಡ್ಯದಲ್ಲೂ ಹಿಂದಿ ಹೇರಿಕೆಯನ್ನು ವಿರೋಧಿಸಿ ಕರವೇ ಕಾರ್ಯಕರ್ತರು ಪ್ರತಿಭಟನೆ ನೆಡೆಸಿದ್ದಾರೆ. ಮಂಡ್ಯದ ಮಹಾವೀರ ವೃತ್ತದಲ್ಲಿ ಭಾರೀ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ಪ್ರತಿಕೃತಿ ದಹಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೇ ಮೈಸೂರು-ಬೆಂಗಳೂರು ಹೆದ್ದಾರಿ ತಡೆದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ರಾಜ್ಯದಲ್ಲಿ ಹಿಂದಿ ಹೇರಿಕೆ ಬೇಡವೆಂದು ಪ್ರತಿಭಟಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ