ಚಾಕುವಿನಿಂದ ಇರಿದು ವ್ಯಕ್ತಿ ಕೊಲೆ !

Kannada News

28-07-2017

ಕೋಲಾರ: ಜಮೀನು ವಿವಾದ ಹಿನ್ನೆಲೆ, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದೂ, ಮಾರಾಮಾರಿಯಲ್ಲಿ ವ್ಯಕ್ತಿಗೆ ಚಾಕುವಿನಿಂದ ಇರಿದಿದ್ದರಿಂದ, ವ್ಯಕ್ತಿ ಸಾವನ್ನಪ್ಪಿದ್ದಾನೆ. ದಿನೇಶ್ (೨೨) ಮೃತ ಯುವಕ. ಕೋಲಾರ ಜಿಲ್ಲೆ ಮುಳಬಾಗಿಲು ಪಟ್ಟಣದ, ನೂಗಲುಬಂಡೆ ಬಡಾವಣೆಯಲ್ಲಿ ಘಟನೆ ನಡೆದಿದೆ. ಶಂಕರ, ಮಣಿ, ಸೀನ ಎಂಬುವವರು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ಈ ಘರ್ಷಣೆ ನಡೆದಿದೆ. ತೀವ್ರವಾಗಿ ಗಾಯಗೊಳಗಾಗಿದ್ದ, ದಿನೇಶ್ ನನ್ನು ಬೆಂಗಳೂರು ಅಸ್ಟ್ರೋ ಆಸ್ಪತ್ರಗೆ ದಾಖಲು‌ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. ಮುಳಬಾಗಿಲು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ