ಇನ್ವೆಸ್ಟ್ ಕರ್ನಾಟಕ, ಮಂಡಳಿ ಸಭೆ.

Kannada News

28-07-2017

ಬೆಂಗಳೂರು: ರಾಜ್ಯದಲ್ಲಿ  ಬಂಡವಾಳ ಹೂಡಿಕೆಗೆ ಸೂಕ್ತ ವಾತಾವರಣವಿದ್ದು, ಹೂಡಿಕೆ ಪ್ರಕ್ರಿಯೆ ತ್ವರಿತಗೊಳಿಸುವಂತೆ ಬೃಹತ್ ಕೈಗಾರಿಕಾ ಮತ್ತು ಮೂಲಸೌಕರ್ಯ ಖಾತೆ ಸಚಿವ ಆರ್.ವಿ. ದೇಶಪಾಂಡೆ ಇಂದಿಲ್ಲಿ ಸೂಚನೆ ನೀಡಿದ್ದಾರೆ. ನಗರದಲ್ಲಿಂದು ನಡೆದ ಇನ್ವೆಸ್ಟ್ ಕರ್ನಾಟಕ ಮಂಡಳಿಯ ಸಭೆಯಲ್ಲಿ, ಈ ಸೂಚನೆ ನೀಡಿದ ಅವರು, ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಆಗಿರುವ ಒಪ್ಪಂದದಂತೆ ಹೂಡಿಕೆಯನ್ನು ತ್ವರಿತಗೊಳಿಸಬೇಕು. ಬಂಡವಾಳ ಹೂಡಿಕೆಗೆ ಉತ್ತಮ ವಾತಾವರಣ ನಿರ್ಮಿಸುವಂತೆ ಅವರು ನಿದೇರ್ಶನ ನೀಡಿದರು. ಸಭೆಯಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ರಂಗದಲ್ಲಿ ಆಗಿರುವ ಪ್ರಗತಿ, ಹೂಡಿಕೆಯ ಅವಕಾಶಗಳು ಸೇರಿದಂತೆ ಹಲವು ವಿಷಯಗಳನ್ನು ಚರ್ಚಿಸಲಾಯಿತು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ