ಭೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ !

Kannada News

29-07-2017

ಬೆಂಗಳೂರು: ಬೆಂಗಳೂರಿನ ಹೆಬ್ಬಾಳದ ಮೇಲ್ಸೇತುವೆ ಮೇಲೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದೂ, ಘಟನೆಯಲ್ಲಿ ಓಲಾ ಕ್ಯಾಬ್ ಚಾಲಕ ಮತ್ತು ಓರ್ವ ಪ್ಯಾಸೆಂಜರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಶೋಕ ಲೈಲ್ಯಾಂಡ್ ಲಾರಿಗೆ ಓಲಾ ಕ್ಯಾಬ್ ಡಿಕ್ಕಿ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನಿಂದ, ಏರ್ ಪೋರ್ಟ್ ಕಡೆಗೆ ಹೋಗುತ್ತಿದ್ದಾಗ, ಅಪಘಾತ ಸಂಭವಿಸಿದ್ದೂ, ಘಟನೆಯಲ್ಲಿ ದೆಹಲಿ ಮೂಲದ ಉಮೇಶ್ ಕುಮಾರ್ ಮಿಶ್ರ ಮೃತ ಪ್ಯಾಸೆಂಜರ್ ಎಂದು ತಿಳಿದು ಬಂದಿದೆ. ಓಲಾ ಕ್ಯಾಬ್ ಚಾಲಕನ ಗುರುತು ಪತ್ತೆಯಾಗಿಲ್ಲ. ಅಪಘಾತ ಸಂಭವಿಸಿದ್ದರಿಂದ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಆಗಿದ್ದೂ ರಸ್ತೆಯುದ್ದಕ್ಕೂ ವಾಹನಗಳು ಸಾಲು ಗಟ್ಟಿ ನಿಂತಿದ್ದವು. ಅಪಘಾತ ಸಂಭವಿಸಿ ಒಂದು ಗಂಟೆಯಾದರೂ, ಸ್ಥಳಕ್ಕೆ ಬಾರದ ಪೊಲೀಸರ ವಿರುದ್ಧ, ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ