ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರ !

Kannada News

29-07-2017

ಚಿತ್ರದುರ್ಗ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿರುವ ಹೀನ ಕೃತ್ಯ, ಚಿತ್ರದುರ್ಗ ತಾಲ್ಲೂಕಿನ ಐನಹಳ್ಳಿ ಕುರುಬರಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ದುಷ್ಕರ್ಮಿಗಳು ಅತ್ಯಾಚಾರ ಮಾಡದ್ದಾರೆ. ಬಾಯಿಗೆ ಬಟ್ಟೆ ತುರುಕಿ ಮೂವರು ಕಾಮುಕ ಯುವಕರು ಈ ಹೀನ ಕೃತ್ಯ ಎಸಗಿದ್ದಾರೆ. ನಂತರ ತಾಲ್ಲೂಕಿನ, ಭರಮಸಾಗರ ಬಳಿ ಅಪ್ರಾಪ್ತೆಯನ್ನು ಎಸೆದು ಪರಾರಿಯಾಗಿದ್ದೂ, ಮೂವರಲ್ಲಿ ಒಬ್ಬನನ್ನು ಸೋಮಶೇಖರ್ ಎಂದು ಬಾಲಕಿ ಗುರುತು ಹಿಡಿದಿದ್ದಾಳೆ. ಅಸ್ವಸ್ಥ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದೂ, ಚಿಕಿತ್ಸೆ ನೀಡಲಾಗುತ್ತಿದೆ. ತಾಲ್ಲೂಕಿನ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಅರೋಪಿಗಳಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ