ಎಚ್-1 ಎನ್-1 ಗೆ ಮಹಿಳೆ ಬಲಿ !

Kannada News

29-07-2017

ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಎಚ್-1 ಎನ್-1 ಸೋಂಕಿಗೆ ಮಹಿಳೆಯೊಬ್ಬರು  ಬಲಿಯಾಗಿದ್ದಾರೆ. ರೀಟಾ ಫರ್ನಾಂಡೀಸ್ (೫೫) ಮೃತ ಮಹಿಳೆ. ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಹಾಸಣಗಿ ಗ್ರಾಮದ ಮಹಿಳೆ ಎಂದು ತಿಳಿದು ಬಂದಿದೆ. ಶಿರಸಿಯ ಖಾಸಗಿ ಆಸ್ಪತ್ರೆಯಲ್ಲಿ ಈಕೆಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮುಂಜಾನೆ ಸಾವನ್ನಪ್ಪಿದ್ದಾರೆ. ಘಟನೆಯಿಂದ ಕಂಗೆಟ್ಟ ಗ್ರಾಮದ ಜನತೆ, ಎಚ್-1 ಎನ್-1  ಮಹಾಮಾರಿಗೆ ಕಂಗಾಲಾಗಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ