‘ಅಯೋಗ್ಯ’ ಜನಪ್ರತಿನಿಧಿಗಳಿಗೆ ಧಿಕ್ಕಾರ..?

Kannada News

31-07-2017

ಮಂಡ್ಯ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮಂಡ್ಯ ಜನಪ್ರತಿನಿಧಿಗಳ ವಿರುದ್ಧ, ಕರ್ನಾಟಕ ರಾಜ್ಯ ರೈತ ಸಂಘ ಪ್ರತಿಭಟನೆ ನಡೆಸಿದ್ದಾರೆ. ಪಕ್ಷಾತೀತವಾಗಿ ಎಲ್ಲಾ ಶಾಸಕರ, ಸಂಸದರ, ವಿಧಾನ ಪರಿಷತ್ ಸದಸ್ಯರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜನಪ್ರತಿಧಿಗಳಿಗೆ ಧಿಕ್ಕಾರ ಕೂಗುವ, ಕಪ್ಪು ಬಾವುಟ ಪ್ರದರ್ಶಿಸುವ ನಾಮಫಲಕ ಹಾಕಿ ತಮ್ಮ  ಅಸಮಾಧಾನ ಹೊರಹಾಕಿದ್ದಾರೆ. ಜಿಲ್ಲೆಯ ರೈತರ ಸಮಸ್ಯೆಗೆ ಸ್ಪಂದಿಸದ "ಅಯೋಗ್ಯ" ಜನಪ್ರತಿನಿಧಿಗಳಿಗೆ ಧಿಕ್ಕಾರ ಎನ್ನುವ ನಾಮಫಲಕವನ್ನು ಜಿಲ್ಲೆಯ ಇಂಡುವಾಳು ಗ್ರಾಮದಲ್ಲಿ ಅಳವಡಿಸಿದ್ದಾರೆ. ಬೆಂಗಳೂರು-ಮೈಸೂರು ಹೆದ್ದಾರಿ ಬಳಿ ಇರುವ ಇಂಡುವಾಳು ಗ್ರಾಮದಲ್ಲಿ ಈ ರೀತಿ ಪ್ರತಿಭಟನೆ ನಡೆಸಿದ್ದೂ, ಅಷ್ಟೇ ಅಲ್ಲದೇ ಸಂಸದ ಮತ್ತು ಏಳು ಮಂದಿ ಶಾಸಕರ, ಮೂವರು ವಿಧಾನ ಪರಿಷತ್ ಸದಸ್ಯರ ಫೋಟೋ ಇರುವ ಫ್ಲೆಕ್ಸ್ ಅಳವಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ