ವ್ಯಕ್ತಿ ಅಪಹರಣ: ಆರೋಪಿಗಳ ಮೇಲೆ ಗುಂಡಿನ ದಾಳಿ !

Kannada News

31-07-2017

ಕಲಬುರಗಿ: ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ಹಣಕ್ಕೆ ಬೇಡಿಕೆ ಇಟ್ಟಿದ್ದ, ಅಪಹರಣಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡದಿದೆ. ಜಿಲ್ಲೆಯ ಫರಹತಾಬಾದನಲ್ಲಿ ಇಂದು ಬೆಳಿಗ್ಗೆ ಘಟನೆ ಸಂಭವಿಸಿದ್ದೂ, ಘಟನೆಯಲ್ಲಿ, ಅಪಹರಣಾಕಾರರಾದ ಕಿರಣಕುಮಾರ ಮತ್ತು ದೀಪಕ ಎಂಬುವರು ಗಾಯಗೊಂಡಿದ್ದಾರೆ. ಇವರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದ್ದೂ, ಚಿಕಿತ್ಸೆ ಪಡೆಯುತ್ತಿದ್ದಾರೆ. ತಾವರಖೆಡ ಗ್ರಾಮದ ಶ್ರೀನಾಥ್ ಎಂಬಾತನನ್ನು ಅಪಹರಿಸಿದ ದುಷ್ಕರ್ಮಿಗಳು ೧೫ ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು. ಈ ಕುರಿತು ಶ್ರೀನಾಥ್ ಅವರ ಕುಟುಂಬಸ್ಥರು ಪ್ರಕರಣ ದಾಖಲಿಸಿದ್ದರು. ಇನ್ನು ಪ್ರಕರಣ ಬೆನ್ನತ್ತಿದ ಪೊಲೀಸರು, ಅಪಹರಣಾಕಾರರು ಫರಹತಾಬಾದ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ, ದಾಳಿ ನಡೆಸಿದ್ದಾರೆ. ಈ ವೇಳೆ ಅಪಹರಣಾಕಾರರೂ ಪೊಲೀಸರ ಮೇಲೆ ದಾಳಿಗೆ ಮುಂದಾಗುತ್ತಿದ್ದಂತೆ, ಆತ್ಮ ರಕ್ಷಣೆಗಾಗಿ ಅವರತ್ತ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಆರೋಪಿಗಳ ಕಾಲಿಗೆ ಗುಂಡು ತಗುಲಿದೆದ್ದೂ, ಪೊಲೀಸ್ ಸಿಬ್ಬಂದಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ