ಪ್ರತ್ಯೇಕ ಧರ್ಮ: ಮೈಸೂರಿನಲ್ಲೂ ಪ್ರತಿಭಟನೆ !

Kannada News

31-07-2017

ಮೈಸೂರು: ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯಲ್ಲೂ  ಪ್ರತಿಭಟನೆ ಆರಂಭವಾಗಿದೆ. ಲಿಂಗಾಯತ ಧರ್ಮ ಸಮನ್ವಯ ಸಮಿತಿಯಿಂದ ಪ್ರತಿಭಟನೆ ನಡೆಸಿದ್ದೂ, ಮೈಸೂರಿನ ನ್ಯಾಯಾಲಯದ ಬಳಿಯಿರುವ ಮಹಾತ್ಮಗಾಂಧೀಜಿ ಪ್ರತಿಮೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ, ಲಿಂಗಾಯತ ಧರ್ಮಕ್ಕೆ ಸ್ವತಂತ್ರ ಧರ್ಮದ ಮಾನ್ಯತೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಅಷ್ಟೇ ಅಲ್ಲದೇ ಅಖಿಲ ಭಾರತ ವೀರಶೈವ ಮಹಾಸಭಾದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು. ಲಿಂಗಾಯತ ಧರ್ಮವನ್ನು ವೀರಶೈವ ಮಹಾಸಭಾ ಮುಗಿಸಲು ಹೊರಟಿದೆ ಎಂದು ತಮ್ಮ ಆಕ್ರೋಶ ಹೊರಹಾಕಿದ್ದರೆ.

 



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ