ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪ್ರತಿಭಟನೆ !

Kannada News

31-07-2017

ಮಂಡ್ಯ: ಮಂಡ್ಯದ ಕೆರೆ ಕಟ್ಟೆಗಳಿಗೆ ನೀರು ಹರಿಸುವಂತೆ  ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹೋರಾಟ ನಡೆಸಿದ್ದೂ, ಮಂಡ್ಯ ಜೆಡಿಎಸ್ ವತಿಯಿಂದ, ಸಂಸದ ಸಿ.ಎಸ್.ಪುಟ್ಟರಾಜು ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲೆಯ ಜೆಡಿಎಸ್ ಶಾಸಕರು, ಮಾಜಿ ಶಾಸಕರು, ಹಾಲಿ, ಮಾಜಿ ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು, ನಾಯಕರು ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಕೆ.ಆರ್.ಎಸ್ ಡ್ಯಾಂನಿಂದ ನಾಲೆಗಳಿಗೆ ನೀರು ಬಿಡುವಂತೆ ಮತ್ತು ಜಿಲ್ಲೆಯ ಎಲ್ಲಾ ಕೆರೆ ಕಟ್ಟೆಗಳಿಗೆ ನೀರು ಹರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ್ದೂ, ಜಿಲ್ಲಾಧಿಕಾರಿಗಳ ಮೂಲಕ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ