ಸಿಎಂ ವಿರುದ್ಧ ಸಿ.ಎಸ್.ಪುಟ್ಟರಾಜು ವಾಗ್ದಾಳಿ !

Kannada News

31-07-2017

ಮಂಡ್ಯ: ಸಿಎಂ ಸಿದ್ದರಾಮಯ್ಯ ವಿರುದ್ಧ, ಮಂಡ್ಯದ ಜೆಡಿಎಸ್ ಸಂಸದ ಸಿ.ಎಸ್.ಪುಟ್ಟರಾಜು ಅವರು ವಾಗ್ದಾಳಿ ನಡೆಸಿದ್ದಾರೆ. ಮಂಡ್ಯದಲ್ಲಿಂದು ಮಾತನಾಡಿದ ಅವರು, ಯಾರು ಏನು ಮಾಡ್ತಾರೆ ಅನ್ನೋ ಮನೋಭಾವ ರಾಜ್ಯ ಸರ್ಕಾರಕ್ಕೆ ಬಂದಿದೆ, ಇರೋವರೆಗೆ ಮಜಾ ಮಾಡ್ಕೊಂಡು ಕುರ್ಚಿಯಲ್ಲಿ ಕುಳಿತುಕೊಂಡು ಹೋಗೋಣ ಅಂತಾ ಅನ್ಕೊಂಡಿರಬೇಕು, ಆದರೆ ಜನ ತಿರುಗಿ ಬಿದ್ದರೆ ಒಂದು ಕ್ಷಣ ಕೂಡ ಕುರ್ಚಿಯಲ್ಲಿ ಕುಳಿತು ಕೆಲಸ‌  ಮಾಡಲಾಗುವುದಿಲ್ಲ ಎಂದು, ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕೂಡಲೇ ಕೆರೆ, ಕಟ್ಟೆಗಳಿಗೆ ನೀರು ಹರಿಸುವ ಕೆಲಸ ರಾಜ್ಯ ಸರ್ಕಾರ ಮಾಡಬೇಕು, ಮಂಡ್ಯ ಜಿಲ್ಲೆಯನ್ನು ಕಡೆಗಣಿಸಿದ ನಾಯಕರು ಯಾವ ರೀತಿ ಮನೆಗೆ ಹೋಗಿದ್ದಾರೆ ಎಂದು ಇತಿಹಾಸ ಹೇಳುತ್ತದೆ, ಆ ರೀತಿ ಜಿಲ್ಲೆಯ ಮೇಲೆ ದ್ವೇಷ ಸಾಧಿಸಿದರೆ, ಆ ನಾಯಕರ ಸಾಲಿಗೆ ಸಿದ್ದರಾಮಯ್ಯ ಕೂಡ ನಿಲ್ಲುತ್ತಾರೆ ಎಂದು ಆರೋಪಿಸಿದ್ದಾರೆ. ನೀರು ಹರಿಸಬೇಕು ಎಂದು ಸರ್ಕಾರಕ್ಕೆ ಗಡುವು ಕೊಡುವ ಪರಿಸ್ಥಿತಿ ಇಲ್ಲ, ಈ ಹಿನ್ನೆಲೆಯಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆ ಮಾಡಬೇಕಿತ್ತು, ಇದನ್ನು ಮನಗಂಡ ಸರ್ಕಾರ ಆಗಸ್ಟ್ 5ಕ್ಕೆ ಸರ್ವ ಪಕ್ಷ ಸಭೆ ಕರೆದಿತ್ತು. ಆದರೆ ಈಗ ತಮ್ಮ ಮಾತಿಗೆ ಉಲ್ಟಾ ಹೊಡೆದಿದ್ದಾರೆ ಎಂದರು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಎಲ್ಲಾ ನಾಯಕರು ಸಿಎಂ ಅವರನ್ನು ಭೇಟಿ ಮಾಡುವ ತೀರ್ಮಾನ ಮಾಡಿದ್ದೇವೆ. ನಮ್ಮ ಮನವಿಗೆ ಸ್ಪಂದಿಸದಿದ್ದರೆ ಎಂತಹ ಹೋರಾಟಕ್ಕೂ ಸಿದ್ದರಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ