ನೀರಿಗಾಗಿ ರಕ್ತದಲ್ಲಿ ಸಹಿ ಹಾಕಿದ ರೈತರು !

31-07-2017
ಮಂಡ್ಯ: ಕಳೆದ ಕೆಲ ದಿನಗಳಿಂದ ಮಂಡ್ಯ-ಮೈಸೂರಿನಲ್ಲಿ ನಾಲೆಗಳಿಗೆ ನೀರು ಹರಿಸುವಂತೆ ನಡೆಯುತ್ತಿರುವ ಹೋರಾಟಗಳಿಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದ್ದರಿಂದ, ನೊಂದ ರೈತರು ನಮಗೆ ದಯಾಮರಣ ಕೊಡಿ, ಇಲ್ಲವೇ ನಾಲೆಗಳಿಗೆ ನೀರು ಬಿಡಿ ಎಂದು ರಕ್ತದಲ್ಲಿ ಸಹಿ ಮಾಡುವ ಮೂಲಕ ರಾಷ್ಟ್ರಪತಿಗೆ ಪತ್ರ ಬರೆದಿದ್ದಾರೆ. ಕಾವೇರಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿ ರಕ್ತ ಸಹಿ ಮಾಡಿದ ರೈತರು, ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ, ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ, ಕೆ.ಆರ್.ಎಸ್ ಡ್ಯಾಂಗೆ ಹರಿದು ಬರುತ್ತಿರುವ ನೀರನ್ನು ತಮಿಳುನಾಡಿಗೆ ಹರಿಸಲಾಗುತ್ತಿದೆ, ಇದರಿಂದ ನಮಗೆ ಅನ್ಯಾಯವಾಗಿದೆ. ಆದ್ದರಿಂದ ನಾಲೆಗಳಿಗೆ ನೀರು ಬಿಡಿ, ಇಲ್ಲವೇ ದಯಾಮರಣ ಕೊಡಿ ಎಂದು ನೊಂದ ರೈತರು ರಕ್ತದಲ್ಲಿ ಸಹಿ ಮಾಡಿ, ರಾಷ್ಟ್ರಪತಿಗೆ ತಮ್ಮ ಮನವಿ ರವಾನಿಸಿದ್ದಾರೆ.
ಒಂದು ಕಮೆಂಟನ್ನು ಹಾಕಿ