ಕಾರು-ಟೆಂಪೋ ಮುಖಾಮುಖಿ ಡಿಕ್ಕಿ

Kannada News

31-07-2017

ಬೆಂಗಳೂರು: ವೇಗವಾಗಿ ಹೋಗುತ್ತಿದ್ದ ಟಾಟಾ ಇಂಡಿಕಾ ಕಾರು ಮತ್ತು ಟೆಂಪೋ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟು, ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕುಮಾರಸ್ವಾಮಿ ಲೇಔಟ್‍ನ ಕನಕಪುರ ರಸ್ತೆಯ ನೈಸ್ ರಸ್ತೆ ಜಂಕ್ಷನ್ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕೊಡಗು ಮೂಲದ ಎಲೆಕ್ಟ್ರಾನಿಕ್ ಸಿಟಿಯ ವಿಜಯ್ ಕುಮಾರ್(23) ಎಂದು ಗುರುತಿಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಕಾರು ಚಾಲಕ ಮಮತ್‍ ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ. ಕನಕಪುರದ ಕಡೆಯಿಂದ ನಗರಕ್ಕೆ ಬರುತ್ತಿದ್ದ ಕಾರು, ನಗರದಿಂದ ಕನಕಪುರದ ಕಡೆಗೆ ಹೋಗುತ್ತಿದ್ದ ಟೆಂಪೋ ನಿನ್ನೆ ರಾತ್ರಿ 11.30ರ ವೇಳೆ ನೈಸ್ ರಸ್ತೆ ಜಂಕ್ಷನ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಪಕ್ಕ ಕುಳಿತಿದ್ದ ವಿಜಯ್ ಕುಮಾರ್ ಸ್ಥಳದಲ್ಲೇ ಮೃತಪಟ್ಟರೆ, ಮಮತ್ ಗಾಯಗೊಂಡು ಕಾರು ಸಂಪೂರ್ಣ ಜಖಂಗೊಂಡಿದೆ. ವಿಜಯ್ ಕುಮಾರ್ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಪ್ರಕರಣ ದಾಖಲಿಸಿರುವ ಕುಮಾರ ಸ್ವಾಮಿ ಲೇಔಟ್ ಸಂಚಾರ ಪೊಲೀಸರು, ಟೆಂಪೋ ಚಾಲಕ ರವಿಕುಮಾರ್ ನನ್ನು ಬಂಧಿಸಿ, ಮುಂದಿನ ತನಿಖೆ ಕೈಗೊಂಡಿದ್ದಾರೆ, ಎಂದು ಡಿಸಿಪಿ ಶೋಭಾರಾಣಿ ತಿಳಿಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ