ಬಿ.ಎಸ್.ವೈ ಗೆ ಮತ್ತೆ ಸಂಕಷ್ಟ !

31-07-2017 281
ಬೆಂಗಳೂರು: ಡಿನೋಟಿಫಿಕೇಷನ್ ಪ್ರಕರಣ ಸಂಬಂಧ ಸೆಪ್ಟೆಂಬರ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಅಗ್ನಿ ಪರೀಕ್ಷೆ ಎದುರಾಗಲಿದೆ. ಬಿ.ಎಸ್.ವೈ ಅವರ ವಿರುದ್ಧ ದಾಖಲಾಗಿದ್ದ 15 ಡಿನೋಟಿಫಿಕೇಷನ್ ಪ್ರಕರಣಗಳ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್ ಎಲ್ಲವನ್ನು ರದ್ದು ಮಾಡಿತ್ತು. ಆದರೆ ರಾಜ್ಯ ಸರ್ಕಾರ ಪ್ರಕರಣವನ್ನು ಕೈಬಿಡಲು ಒಪ್ಪದೆ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಮೇಲ್ಮನವಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಸುಪ್ರೀಂಕೋರ್ಟ್ ಸೆಪ್ಟೆಂಬರ್ ನಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿದೆ. ಹೀಗಾಗಿ ಬಿ.ಎಸ್.ವೈ.ಗೆ ಮತ್ತೆ ಸಂಕಷ್ಟ ಎದುರಾಗಿದೆ.
ಒಂದು ಕಮೆಂಟನ್ನು ಹಾಕಿ