ನಟ, ಸಿಸಿಎಲ್ ಆಟಗಾರ ಧ್ರುವ ಶರ್ಮಾ ನಿಧನ..

Kannada News

01-08-2017

ಬೆಂಗಳೂರು: ನಟ‌ ಹಾಗೂ‌ ಸಿಸಿಎಲ್ ಆಟಗಾರ ಧ್ರುವ ಶರ್ಮಾ ನಿಧನರಾಗಿದ್ದಾರೆ. ಇಂದು ಯಶವಂತಪುರ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಧ್ರುವ ಶರ್ಮಾ, ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದೂ, ಕಳೆದ ಶನಿವಾರವಷ್ಟೆ ಆಸ್ಪತ್ರೆಗೆ ದಾಖಲಾಗಿದ್ದರು. ಶನಿವಾರ ಇದ್ದಕ್ಕಿದ್ದಂತೆ ತಲೆಸುತ್ತು ಬಂದು ಬಿದ್ದಿದ್ದು, ಕೂಡಲೆ ಅವರನ್ನು ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆ ಮಾಡಿದಾಗ ಬಹು ಅಂಗಾಂಗ ವೈಫಲ್ಯವಾಗಿರುವುದು ತಿಳಿದು ಬಂದಿದ್ದೂ, ಚಿಕಿತ್ಸೆಗೆ ಸ್ಪಂದಿಸದ ಧ್ರುವ  ರಾತ್ರಿ ಹೃದಯಾಘಾತದಿಂದ ಸಾವನಪ್ಪಿದ್ದಾರೆ.  35 ವರ್ಷದ ಧ್ರುವ ಶರ್ಮಾ ಸಿಸಿಎಲ್ ಕ್ರಿಕೆಟ್ ಆಟಗಾರನಾಗಿದ್ದೂ, ಹಲವು ಕನ್ನಡ ಚಲನಚಿತ್ರಗಳಲ್ಲೂ ನಟಿಸಿದ್ದಾರೆ. ಧ್ರುವ ಅಪಾರ ಅಭಿಮಾನಿಗಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಕನ್ನಡ ಚಿತ್ರರಂಗ ಹಾಗೂ ಕ್ರಿಕೆಟ್ ಅಭಿಮಾನಿಗಳು ಧ್ರುವ  ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ