ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ: ಉದ್ವಿಗ್ನ ಪರಿಸ್ಥಿತಿ

Kannada News

01-08-2017

ಮೈಸೂರು: ಬಾಬಾ ಸಾಹೇಬ್ ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ  ಮೈಸೂರಿನ ನಂಜನಗೂಡು ತಾಲ್ಲೂಕಿನ ಹೆಮ್ಮರಗಾಲ ಗ್ರಾಮದಲ್ಲಿ ನಡೆದಿದೆ. ಆದರೆ ಬಂಧನ ಖಂಡಿಸಿ ಒಂದು ಕೋಮಿನ ಜನರು ಕಳೆದ ರಾತ್ರಿ ಉಗ್ರ ಪ್ರತಿಭಟನೆ ನಡೆಸಿದ್ದೂ, ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಒಂದು ಕೋಮಿನ ಜನರಿಂದ ಮತ್ತೊಂದು ಕೋಮಿನ ಜನರ ವಿರುದ್ದ ಗ್ರಾಮದ ಬಸ್ ನಿಲ್ದಾಣದ ಬಳಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಕವಲಂದೆ ಮತ್ತು ನಂಜನಗೂಡು ಪೋಲಿಸರು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ. ನಂಜನಗೂಡು ವಿಭಾಗದ ಡಿ.ವೈ.ಎಸ್.ಪಿ ದಿವ್ಯಾ ನೇತೃತ್ವದಲ್ಲಿ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದ್ದೂ, ಕೋಮಗಲಭೆ ನಿಯಂತ್ರಿಸಲು ಹೆಮ್ಮರಗಾಲ ಗ್ರಾಮದಲ್ಲಿ ೧೪೪ ಸೆಕ್ಷನ್ ಜಾರಿ ಮಾಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ