ನೀರಿಗಾಗಿ ಪಂಚಾಯತಿ ಮುಂದೆ ಪ್ರತಿಭಟನೆ !

Kannada News

01-08-2017

ಕೊಪ್ಪಳ: ಕೆಳೆದ ಮೂರು ತಿಂಗಳಿನಿಂದಲೂ ಕುಡಿಯುವ ನೀರಿಗಾಗಿ ಪರಿತಪಿಸುತ್ತಿರುವ ಕೊಪ್ಪಳದ, ಗಂಗಾವತಿ ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದ ಜನತೆ, ಗ್ರಾಮ ಪಂಚಾಯತಿಯ ನಿರ್ಲಕ್ಷ್ಯಕ್ಕೆ ಬೇಸತ್ತು ಪ್ರತಿಭಟನೆ ನಡೆಸಿದ್ದಾರೆ. ಗ್ರಾಮ ಪಂಚಾಯತಿ ಕಚೇರಿ ಮುಂದೆ ಸೇರಿದ ನೂರಾರು ಮಹಿಳೆಯರು, ಖಾಲಿ ಬಿಂದಿಗೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೇ ಗ್ರಾಮ ಪಂಚಾಯತಿ ವಿರುದ್ಧ  ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಗ್ರಾಮದ ಮಹಿಳೆಯರು, ಸೇರಿದಂತೆ ಗ್ರಾಮದ ಜನತೆ ಭಾಗಿಯಾಗಿದ್ದೂ. ವಡ್ಡರಹಟ್ಟಿ ಗ್ರಾಮಕ್ಕೆ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿದ್ದಾರೆ.  



ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ