ಪೊಲೀಸರ ಕಣ್ಣು ತಪ್ಪಿಸಿ ಖೈದಿ ಪರಾರಿ !

Kannada News

02-08-2017 427

ಬೆಂಗಳೂರು: ಚಿಕಿತ್ಸೆ ಪಡೆಯುತ್ತಿದ್ದ ಖೈದಿಯೊಬ್ಬ ವಿಕ್ಟೋರಿಯಾ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗ ಮೂಲದ ಮಾಸ್ತಿಕುಮಾರ್(35) ಪರಾರಿಯಾದ ಖೈದಿ. ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಪರಾರಿಯಾದ ಖೈದಿಯು, ಕಳೆದ ಜುಲೈ 29 ರಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪತ್ನಿಯನ್ನು ಕೊಲೆ ಮಾಡಿದ್ದ ಆರೋಪದಡಿ ಬಂಧಿತನಾಗಿದ್ದ ಮಾಸ್ತಿಕುಮಾರ್, ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದರು. ಕೆಲ ತಿಂಗಳ ಹಿಂದೆ ಶಿವಮೊಗ್ಗ ಜೈಲಿನಿಂದ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದರು. ಇನ್ನು, ರಾತ್ರಿ ಜೈಲು ಪೊಲೀಸರ ಕಣ್ಣು ತಪ್ಪಿಸಿ ಮಾಸ್ತಿಕುಮಾರ್ ಪರಾರಿಯಾಗಿದ್ದಾನೆ. ಈ ಬಗ್ಗೆ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದೂ, ಖೈದಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ