ರೆಸಾರ್ಟ್ ಮತ್ತು ಡಿಕೆಶಿ ಮನೆ ಮೇಲೆ ಐಟಿ ದಾಳಿ !

Kannada News

02-08-2017

ಬೆಂಗಳೂರು: ಕಾಂಗ್ರೆಸ್‌ ಗೆ ಕೇಂದ್ರ ಐಟಿ ಇಲಾಖೆ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದೆ. ಈಗಲ್‌ ಟನ್ ರೆಸಾರ್ಟ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುಜರಾತ್ ಶಾಸಕರು ವಾಸ್ತವ್ಯ ಹೂಡಿರುವ ಈಗಲ್‌ ಟನ್ ರೆಸಾರ್ಟ್‌ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಸಂಸದ ಡಿ.ಕೆ ಸುರೇಶ್ ಮತ್ತು ಸಚಿವ ಡಿ.ಕೆ ಶಿವಕುಮಾರ್ ಪಡೆದಿರುವ ಕೊಠಡಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಅಪಾರ ಪ್ರಮಾಣದ ಹಣ ಸಂಗ್ರಹ ಶಂಕೆ ಹಿನ್ನೆಲೆ, ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೇ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ಮನೆ ಹಾಗೂ ಕಚೇರಿ ಮೇಲೂ ಐಟಿ ದಾಳಿ ನಡೆದಿದ್ದು, 20 ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಖಲೆಗಳ ಪರಿಶೀಲನಾ ಕಾರ್ಯ ನಡೆಸಿದ್ದಾರೆ. ಮತ್ತು ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಐಟಿ ದಾಳಿ ನಡೆದಿದೆ. ಅಷ್ಟೇ ಅಲ್ಲದೆ ಕನಕಪುರದ ಕಾಂಗ್ರೆಸ್ ಎಂ.ಎಲ್‌.‌ಸಿ ರವಿ ಮನೆ ಮೇಲೆ ಹಾಗೂ ಡಿ.ಕೆ.ಶಿವಕುಮಾರ್ ಅವರ ಸಂಬಂಧಿಕರ ಮನೆಗಳು ಸೇರಿದಂತೆ 10 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳಿಂದ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ