ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮ ಹತ್ಯೆ !

Kannada News

02-08-2017

ಮಂಡ್ಯ: ಇಟ್ಟಿಗೆ ಕಾರ್ಖಾನೆ ಕಾರ್ಮಿಕರೊಬ್ಬರು ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಮಂಡ್ಯದ ಕೆ.ಆರ್ ಪೇಟೆ ತಾಲ್ಲೂಕಿನ ಬಿ.ಬಾಚಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕೆರೆ ಬಳಿ ಇರುವ ಇಟ್ಟಿಗೆ ಕಾರ್ಖಾನೆಯಲ್ಲಿ ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಸಂಜು (೩೫) ಆತ್ಮಹತ್ಯೆ‌ ಮಾಡಿಕೊಂಡ ಕಾರ್ಮಿಕ. ಈತ ಮೂಲತಃ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಸ್ಕೂರು ಗ್ರಾಮದವರು ಎಂದು ತಿಳಿದು ಬಂದಿದೆ.  ಕಳೆದ ೨ ವರ್ಷಗಳಿಂದ ಕಾರ್ಖಾನೆಯಲ್ಲಿ ಕೆಲಸ ನಿರ್ಹಿಸುತ್ತಿದ್ದ ಸಂಜು, ನಿನ್ನೆರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ, ಇನ್ನು ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ