ರಾಜಕೀಯ ದ್ವೇಷದಿಂದ ಐಟಿ ದಾಳಿ..?

Kannada News

02-08-2017

ಬೆಂಗಳೂರು: ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ನಡೆದ ಆದಾಯ ತೆರಿಗೆ ಇಲಾಖೆ ದಾಳಿಯನ್ನು, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ.ಖಾದರ್ ತೀವ್ರವಾಗಿ ಖಂಡಿಸಿದ್ದಾರೆ. ಇದೊಂದು ರಾಜಕೀಯ ದ್ವೇಷದಿಂದ ಮಾಡಿದ ದಾಳಿಯಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಸಚಿವ ಯು.ಟಿ.ಖಾದರ್. ಗುಜರಾತ್ ನಲ್ಲಿ ಕುದುರೆ ವ್ಯಾಪಾರದ ಮೂಲಕ ಆಪರೇಷನ್ ಕಮಲ ನಡೆಯುವುದನ್ನು ತಡೆಯುವ ಸಲುವಾಗಿ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ಗುಜರಾತ್ ಶಾಸಕರಿಗೆ ಬೆಂಗಳೂರಿನಲ್ಲಿ ಆಶ್ರಯ ನೀಡಲಾಗಿದೆ, ಇದರ ಜವಾಬ್ದಾರಿ ಸಚಿವ ಡಿ.ಕೆ.ಶಿವಕುಮಾರ್ ವಹಿಸಿದ್ದರು, ಇದನ್ನು ಮನಸ್ಸಿನಲ್ಲಿಟ್ಟುಕೊಂಡು ರಾಜಕೀಯ ದ್ವೇಷದಿಂದ ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಆದಾಯ ತೆರಿಗೆ ದಾಳಿ ಮಾಡಿಸುವ ಮೂಲಕ ಹೆದರಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಇದು ರಾಜಕೀಯ ಪ್ರೇರಿತ ದಾಳಿಯಾಗಿದೆ ಎಂದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ