ಅಪಘಾತ: ರಕ್ಷಣೆಗೆಂದು ಹೋದವನ ದುರ್ಮರಣ !

Kannada News

02-08-2017

ಬೆಂಗಳೂರು: ನಿಯಂತ್ರಣ ತಪ್ಪಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಪಾರಾಗಿದ್ದು, ರಕ್ಷಣೆಗೆ ಹೋದ ಯುವಕನೊಬ್ಬ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ತುಮಕೂರು ಜಿಲ್ಲೆಯ, ಗುಬ್ಬಿ ಮೂಲದ ಮಲ್ಲೇಶ್ (25) ಮೃತಪಟ್ಟಿರುವ ದುರ್ದೈವಿಯನ್ನು ಎಂದು ಗುರುತಿಸಲಾಗಿದೆ. ಬಸ್ ಅಪಘಾತದಲ್ಲಿ ಕಬ್ಬಿಣದ ಸರಳುಗಳ ನಡುವೆ ಸಿಲುಕಿದ್ದ ಚಾಲಕನ, ರಕ್ಷಣೆ ಮಾಡಲು ಹೋಗಿ ಆತ ಸಾವನ್ನಪ್ಪಿದ್ದಾನೆ. ತುಮಕೂರು ಮಾರ್ಗದಲ್ಲಿ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಕಂಪನಿಗೆ ಸೇರಿದ ಎಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ, ಹೆದ್ದಾರಿ ರಸ್ತೆಯಿಂದ ನೀಲಿಗಿರಿ ತೋಪಿಗೆ ನುಗ್ಗಿ, ವಿದ್ಯುತ್ ಕಂಬವೊಂದಕ್ಕೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಡಿಕ್ಕಿಯಲ್ಲಿ ಗಾಯಗೊಂಡ ಚಾಲಕನ ರಕ್ಷಣೆ ಮಾಡಲು ಹೋದ ಮಲ್ಲೇಶ್ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ. ಗಾಯಗೊಂಡ ಬಸ್ ಚಾಲಕನನ್ನ ಆಸ್ಪತ್ರೆಗೆ ಸೇರಿಸಲಾಗಿದೆ. ಬಸ್‍ನಲ್ಲಿ ಸುಮಾರು 35 ಪ್ರಯಾಣಿಕರಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ