ಐಟಿ ದಾಳಿ: ಸ್ಪಷ್ಟನೆ ನೀಡಿದ ಅಧಿಕಾರಿಗಳು !

Kannada News

02-08-2017

ಬೆಂಗಳೂರು: ಗುಜರಾತ್ ರಾಜ್ಯದ ಶಾಸಕರನ್ನು ರೆಸಾರ್ಟ್‍ಗೆ ಕರೆತಂದು ಅವರಿಗೆ ಆಮಿಷವೊಡ್ಡುತ್ತಿರುವ ಹಿನ್ನೆಲೆಯಲ್ಲಿ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಅವರ ಸಂಬಂಧಿಕರ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಐಟಿ ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಐಟಿ ವಿಭಾಗದ ಅಧಿಕಾರಿಗಳು ನಾವು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದ್ದೇವೆ ಹೊರತು, ಗುಜರಾತ್ ಶಾಸಕರ ಮೇಲೆ ದಾಳಿ ನಡೆಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಗುಜರಾತ್‍ ನ ಕೆಲ ಶಾಸಕರು ಬೆಂಗಳೂರು ಹೊರವಲಯದ ರೆಸಾರ್ಟ್‍ವೊಂದರಲ್ಲಿ ತಂಗಿದ್ದರು. ಇಲ್ಲಿ ಸಚಿವರು ವಾಸ್ತವ್ಯ ಹೂಡಿದ ಹಿನ್ನೆಲೆಯಲ್ಲಿ ದಾಳಿ ಮಾಡಲಾಗಿದೆ. ಶಾಸಕರ ಮೇಲೆ ದಾಳಿ ನಡೆಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಸಕರಿಗೆ ಹಣದ ಆಮಿಷ, ರೆಸಾರ್ಟ್‍ನಲ್ಲಿ ವಾಸ್ತವ್ಯ ಹೂಡಲು ಈ ಸಚಿವರು ಹಾಗೂ ಅವರ ಸಹೋದರ ಸಂಬಂಧಿಗಳು ಉಸ್ತುವಾರಿ ನೋಡಿಕೊಂಡಿದ್ದರು. ಕೆಲವು ದೂರಿನ ಆಧಾರದ ಮೇಲೆ ದಾಳಿ ಮಾಡಲಾಗಿದೆ ಹೊರತು ಇದರಲ್ಲಿ ಯಾವುದೇ ರೀತಿಯ ದುರದ್ದೇಶ ಇಲ್ಲ ಎಂದು ಸ್ಪಷ್ಟನೆ ನೀಡಿದೆ.

ದಾಳಿ ಮಾಡುವ ಮುನ್ನ ಶಾಸಕರಿಗಾಗಲಿ, ಸಂಬಂಧಪಟ್ಟವರಿಗೆ ಮಾಹಿತಿ ನೀಡಿರಲಿಲ್ಲ. ದೂರಿನ ಆಧಾರ ಮತ್ತು ನಮಗೆ ಸಿಕ್ಕ ಮಾಹಿತಿ ಆಧಾರದ ಮೇಲೆ ದಾಳಿ ಮಾಡಲಾಗಿದೆ. ಬೇರೊಂದು ರಾಜ್ಯದ ಶಾಸಕರನ್ನು ರೆಸಾರ್ಟ್‍ನಲ್ಲಿ ಕೂಡಿಡುವುದು ಕಾನೂನು ಬಾಹಿರವಾಗುತ್ತದೆ. ರೆಸಾರ್ಟ್‍ನಲ್ಲಿ ಸಚಿವರು ತಂಗಿದ್ದ ಕೊಠಡಿಗಳು, ಮತ್ತಿತರ ಕಡೆ ದಾಳಿ ಮಾಡಲಾಗಿದೆ. ಕರ್ನಾಟಕದ ಐಟಿ ವಿಭಾಗದ ಅಧಿಕಾರಿಗಳು ಓರ್ವ ಸಚಿವರ ಮನೆ ಮೇಲೆ ದಾಳಿ ಮಾಡಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಪಷ್ಟನೆ ನೀಡಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ