ಬೈಕ್‍ ಗಳ ನಡುವೆ ಮುಖಾಮುಖಿ ಡಿಕ್ಕಿ !

Kannada News

02-08-2017

ಬೆಂಗಳೂರು: ವೇಗವಾಗಿ ಹೋಗುತ್ತಿದ್ದ ಬೈಕ್‍ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಮೃತಪಟ್ಟರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಪೀಣ್ಯದ ಎನ್.ಟಿ.ಟಿ.ಎಫ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಬಾಣಸವಾಡಿಯ ಸಂಜು ಮುತ್ತು ನಾಯ್ಕ(37)ಎಂದು ಮೃತಪಟ್ಟವರನ್ನು ಗುರುತಿಸಲಾಗಿದೆ. ಗಾಯಗೊಂಡಿರುವ ಪೀಣ್ಯದ ಎರಡನೇ ಹಂತದ ಗಣಪತಿಲಾಲ್ ಸಪ್ತಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ನಾಯಕ್ ಅವರು ರಾತ್ರಿ 9.45ರ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‍ನಲ್ಲಿ ಎನ್‍ಟಿಟಿಎಫ್ ರಸ್ತೆಯಲ್ಲಿ, ಹೋಗುತ್ತಿದ್ದಾಗ ಎದುರಿನಿಂದ ಮತ್ತೊಂದು ಬೈಕ್‍ನಲ್ಲಿ ಬಂದ ಗಣಪತಿಲಾಲ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

 

 

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ