ಲಾರಿ ಹರಿದು ವ್ಯಕ್ತಿ ಸಾವು !

Kannada News

02-08-2017

ಬೆಳಗಾವಿ: ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೆ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಜಿಲ್ಲೆಯ ಬೆಲ್ಲದ ಬಾಗೇವಾಡಿ ಬೋಗಾರವೇಸ್ ಬಳಿ ಈ ಅಪಘಾತ ಸಂಭವಿಸಿದ್ದೂ, ಖಾನಾಪುರ ತಾಲ್ಲೂಕಿನ ಹಿರೇ ಹತ್ತಿಹೊಳಿ ಗ್ರಾಮದ, ಶಿವಕುಮಾರ ಅಶೋಕ ಜಿನಗೊಂಡ (39) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಬೆಳಿಗ್ಗೆ ವಾಯು ವಿಹಾರಕ್ಕೆಂದು ತೆರಳಿದ್ದಾಗ, ಸಂಭಾಜಿ ವೃತ್ತದ ಬಳಿ ಅಪಘಾತ ಸಂಭವಿಸಿ, ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗಾವಿ ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಲಾರಿ ಚಾಲಕನನ್ನು ಬಂಧಿಸಿದ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ