ಮಹಿಳಾ ರೈತರಿಂದ ಪ್ರತಿಭಟನೆ !

Kannada News

02-08-2017

ಮಂಡ್ಯ: ಮಂಡ್ಯದಲ್ಲಿ ನೀರಿಗಾಗಿ ಇಂದೂ ಕೂಡ ಹೋರಾಟ ಮುಂದುವರೆದಿದ್ದೂ,  ರೈತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ. ರೈತ ಮಹಿಳೆಯರಿಂದ ಪೊರಕೆ ಚಳವಳಿ ನಡೆಸಿದರೆ. ರೈತರು ಚಡ್ಡಿ ಮೆರವಣಿಗೆ ನಡೆಸಿದ್ದಾರೆ. ಸಾವಯವ ಕೃಷಿಕ್ ಫೌಂಡೇಶನ್ ನೇತೃತ್ವದಲ್ಲಿ, ಮಂಡ್ಯದ ಸಂಜಯ ವೃತ್ತದಲ್ಲಿ ಮಾನವ ಸರಪಳಿ ನಿರ್ಮಾಣ ಮಾಡಿ ಪ್ರತಿಭಟಿಸಿದ್ದಾರೆ. ಅಲ್ಲದೇ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದೂ, ಇದರಿಂದ ಹೆದ್ದಾರಿಯುದ್ದಕ್ಕೂ ಸಂಚಾರ ಅಸ್ತವ್ಯಸ್ತವಾಗಿತ್ತು. ಹೋರಾಟದಲ್ಲಿ ರೈತರು, ಮಹಿಳೆಯರು, ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು. ಸರ್ಕಾರ, ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದೂ, ಕೂಡಲೆ ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಇನ್ನೊಂದಡೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು  ರೈತ ಸಂಘದಿಂದ ಧರಣಿ ನಡೆಸಿದ್ದಾರೆ. ಕಾವೇರಿ ಹೋರಾಟಗಾರ ಡಾ.ಜಿ.ಮಾದೇಗೌಡರು, ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ನೇತೃತ್ವದಲ್ಲಿ ಧರಣಿ ನಡೆಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ