ಪ್ರತ್ಯೇಕ ಧರ್ಮ: ಕೊಪ್ಪಳದ ಕುಷ್ಟಗಿ ಬಂದ್ !

Kannada News

03-08-2017

ಕೊಪ್ಪಳ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತಂತೆ, ಅಲ್ಲಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಅಖಿಲ ಭಾರತ ವೀರಶೈವ ಮಹಾಸಭಾದಿಂದ ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣ ಬಂದ್ ಗೆ ಕರೆ ನೀಡಿದ್ದಾರೆ. ವೀರಶೈವ ಮಹಾಸಭಾದ ಕುಷ್ಟಗಿ ತಾಲ್ಲೂಕು ಘಟಕದಿಂದ ಬಂದ್ ಕರೆ ನೀಡಿದ್ದೂ, ಕುಷ್ಟಗಿ ಪಟ್ಟಣದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಲಾಗಿವೆ. ವೀರಶೈವ, ಲಿಂಗಾಯತ ಸಮುದಾಯದಲ್ಲಿ ಒಡಕು ಮೂಡಿಸುವ ಕಾರ್ಯ ನಡೆಯುತ್ತಿದ್ದೂ,  ಬಂದ್ ಕರೆ ನೀಡಿಲಾಗಿದೆ ಎಂದು ಘಟಕದ ವೀರಶೈವ ಮಹಾಸಭಾದ ಮುಖಂಡರು ತಿಳಿಸಿದ್ದಾರೆ. ಅಲ್ಲದೇ ಮಧ್ಯಾಹ್ನ 12 ಗಂಟೆಗೆ  ಬೃಹತ್ ಪ್ರತಿಭಟನೆ ನಡೆಸಲಿದ್ದೂ, ಪ್ರತಿಭಟನೆಯಲ್ಲಿ ವಿವಿಧ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ