ಬಸ್ ಮತ್ತು ಬೈಕ್ ನಡುವೆ ಡಿಕ್ಕಿ !

Kannada News

03-08-2017

ಉತ್ತರ ಕನ್ನಡ: ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು  ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದೂ, ಬೈಕ್ ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ, ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ಈಕೆಯ ಪತಿ ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಬಳಿ ಈ ಅಪಘಾತ ಸಂಭವಿಸಿದೆ. ದೇವಕಾರು ಗ್ರಾಮದ ಪ್ರೇಮಾ ನಾಯ್ಕ ಸ್ಥಳದಲ್ಲೆ ಸಾವನ್ನಪ್ಪಿರುವ ಮಹಿಳೆ ಎಂದು ತಿಳಿದು ಬಂದಿದೆ. ಪತಿ ಕರುಣಾಕರ್ ನಾಯ್ಕ್ ಸ್ಥಿತಿ ಗಂಭೀರವಾಗಿದ್ದೂ, ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಪ್ರಕರಣ  ಸಿದ್ದಾಪುರ ಠಾಣೆಯಲ್ಲಿ ದಾಖಲಾಗಿದ್ದೂ, ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ