ಐಟಿ ದಾಳಿ ಮೋದಿ ಹುನ್ನಾರ..?

Kannada News

03-08-2017

ಮೈಸೂರು: ಸಚಿವ ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ. ಮೈಸೂರಿನ ಗಾಂಧೀ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಐಟಿ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ ಉದ್ದೇಶ ಪೂರ್ವಕವಾಗಿ ಐಟಿ ದಾಳಿ ಮಾಡಿಸಿದೆ, ಇದು ಬಿಜೆಪಿಯ ಸೇಡಿನ ರಾಜಕಾರಣ ಎಂದು ಆರೋಪಿಸಿದ್ದಾರೆ. ಪ್ರತಿಭಟನಾ ವೇಳೆ ಬಿಜೆಪಿ ವಿರುದ್ದ ಧಿಕ್ಕಾರ ಕೂಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಇನ್ನು ಬೆಂಗಳೂರಿನ ಸದಾಶಿವನಗದಲ್ಲಿರುವ ನಿವಾಸದ ಮುಂದೆ, ಜಮಾಯಿಸಿದ ದೇವನಹಳ್ಳಿ ಕಾಂಗ್ರೆಸ್ ಕಾರ್ಯಕರ್ತರು, ಆದಾಯ ತೆರಿಗೆ ದಾಳಿ ನಡೆದಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಪಕ್ಷದ ಯುವ ನಾಯಕ ಸುರೇಶ್ ಮುಖಂಡತ್ವದಲ್ಲಿ ಆಗಮಿಸಿದ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು, ಸದಾಶಿವ ನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಸಮೀಪ ಆಗಮಿಸಿ ಕೆಂದ್ರ ಸರಕಾರದ ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನಾ ನೇತೃತ್ವ ವಹಿಸಿದ ಸುರೇಶ್ ಮಾತನಾಡಿ ಕೇಂದ್ರ ಸರ್ಕಾರ ರಾಜಕೀಯ ಷಡ್ಯಂತ್ರಮಾಡಿ ರಾಜಕೀಯವಾಗಿ ಡಿ.ಕೆ.ಶಿವಕುಮಾರ್ ಅವರನ್ನು ಮುಗಿಸಲು ಐ.ಟಿ.ದಾಳಿ ನಡೆಸಿದೆ ಎಂದು ಆರೋಪಿಸಿದ್ದಾರೆ. ಪ್ರತಿಭಟನಾಕಾರರು ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಬೇಕು ಎಂದು ಪಟ್ಟು ಹಿಡಿದಾಗ, ಪೋಲಿಸರು ಸಚಿವರ ಭೇಟಿ ಸಾಧ್ಯವಿಲ್ಲ ಎಂದು ಮನವೊಲಿಸಿದರು, ನಂತರ ಪ್ರತಿಭಟನಾಕಾರರು ಅಲ್ಲಿಂದ ತೆರೆಳಿದರು.

ಕೋಲಾರ ಜಿಲ್ಲೆಯ ವಿವಿಧೆಡೆಯೂ, ಡಿ.ಕೆ.ಶಿವಕುಮಾರ್ ಮನೆ ಮೇಲೆ ಐಟಿ ದಳಿ ಖಂಡಿಸಿ ಪ್ರತಿಭಟನೆ ನಡೆಸಲಾಯಿತು, ಕೋಲಾರದ ಕಾಲೇಜು ವೃತ್ತದಲ್ಲಿ ಹಾಗೂ ಮಾಲೂರು ತಹಶೀಲ್ದಾರ್ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು  ಪ್ರತಿಕೃತಿ ದಹಿಸಿ ಪ್ರತಿಭಟಿಸಿದ್ದಾರೆ. ಪ್ರತಿಭಟನಾ ವೇಳೆ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶಗೊಂಡ ನೂರಾರು ಕಾಂಗ್ರೆಸ್ ಕಾರ್ಯಕರ್ತರು, ಐಟಿ ದಾಳಿ ಮೋದಿ ಹುನ್ನಾರ ಎಂದು ಆರೋಪಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ