ಡಿ.ಕೆ.ಶಿವಕುಮಾರ್ ಭ್ರಷ್ಟಾಚಾರದ ಪ್ರತಿರೂಪ..?

Kannada News

03-08-2017

ಹುಬ್ಬಳ್ಳಿ: ಇಂಧನ ಸಚಿವ ಅವರ ಮನೆ ಮತ್ತು ಅವರಿಗೆ ಸಂಬಂಧಿಸಿದ ಇನ್ನಿತರ ಸ್ಥಳಗಳಲ್ಲಿ ಐಟಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ, ಸಚಿವ ಡಿ.ಕೆ.ಶಿವಕುಮಾರ್ ರಾಜೀನಾಮೆಗೆ, ಸಾಮಾಜಿಕ ಹೋರಾಟಗಾರ ಎಸ್.ಆರ್ ಹಿರೇಮಠ ಒತ್ತಾಯಿಸಿದ್ದಾರೆ. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ವ್ಯವಸ್ಥಿತ ದಾಳಿ ಮಾಡಿರುವುದು ಸ್ವಾಗತಾರ್ಹ. ಡಿ.ಕೆ. ಶಿವಕುಮಾರ್  ಭ್ರಷ್ಟಾಚಾರದ ಪ್ರತಿರೂಪ, ಇವರು ಸಾರ್ವಜನಿಕ ಜೀವನದಲ್ಲಿ ಇರಲು ಅನರ್ಹರು ಎಂದಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಅಕ್ರಮಗಳ ಬಗ್ಗೆ ಪ್ರಧಾನಮಂತ್ರಿ, ಎಐಸಿಸಿ ಅಧ್ಯಕ್ಷರು, ಸಿಬಿಐ ಹಾಗೂ ಜಾರಿ ನಿರ್ದೇಶನಾಲಯಕ್ಕೆ ಪತ್ರ ಬರೆಯಲಾಗಿತ್ತು. ಐಟಿ ಸಮಯೋಚಿತ ದಾಳಿಯನ್ನು ಜನ ಸಂಗ್ರಾಮ ಪರಿಷತ್ ಸ್ವಾಗತಿಸುತ್ತದೆ. ಡಿ.ಕೆ. ಶಿವಕುಮಾರ್ ಕೂಡಲೆ ಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಬೇಕು, ಇಲ್ಲವೇ ಸಿಎಂ ಸಿದ್ದರಾಮಯ್ಯನವರು ಡಿ.ಕೆ. ಶಿವಕುಮಾರ್ ಅವರನ್ನು ಸಂಪುಟದಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.  ಕಾಂಗ್ರೆಸ್ ಭ್ರಷ್ಟಾಚಾರದ ಸ್ವರೂಪವಾಗಿದೆ. ಯುಪಿಎ ಸರ್ಕಾರವಿದ್ದಾಗ ಡಿಕೆಶಿ ಅಕ್ರಮ ಮುಚ್ಚಿಟ್ಟಿತ್ತು. ಸುಪ್ರೀಂ ಕೋರ್ಟ್ ಆದೇಶವಿದ್ದರೂ ತನಿಖೆ ನಡೆದಿರಲಿಲ್ಲ. ಐಟಿ ದಾಳಿಗೆ ರಾಜಕೀಯ ಬಣ್ಣ ಬಳಿಯಬಾರದು ಹಿರೇಮಠ ಹೇಳಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ