ಕುಷ್ಟಗಿ ಬಂದ್: ಬೃಹತ್ ಪ್ರತಿಭಟನಾ ಮೆರವಣಿಗೆ !

Kannada News

03-08-2017

ಕೊಪ್ಪಳ: ಅಖಿಲ ಭಾರತ ವೀರಶೈವ ಮಹಾಸಭಾದಿಂದ, ಕೊಪ್ಪಳದ ಕುಷ್ಟಗಿ ಬಂದ್ ಗೆ ಕರೆ ನೀಡಿದ್ದೂ, ಕೊಪ್ಪಳದ ಕುಷ್ಟಗಿಯಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಮಾಡಿ ಬೆಂಬಲ ಸೂಚಿಸಲಾಗಿತ್ತು. ಅಲ್ಲದೇ ಅಖಿಲ ಭಾರತ ವೀರಶೈವ ಮಹಾಸಭಾದಿಂದ, ಬೃಹತ್ ಪ್ರತಿಭಟನಾ ಮೆರವಣಿಯನ್ನು ನಡೆಸಿದ್ದಾರೆ. ಹೆಬ್ಬಾಳದ ಸ್ವಾಮೀಜಿಯ ನೇತೃತ್ವದಲ್ಲಿ, ಕುಷ್ಟಗಿ ಪಟ್ಟಣದ ರೇಣುಕಾಚಾರ್ಯ ಮಠದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿದ್ದೂ, ಬೋದುರಿನ ಮದ್ದಾನಯ್ಯ ಸ್ವಾಮಿ ಸೇರಿದಂತೆ ಅನೇಕರು ಭಾಗಿಯಾಗಿದ್ದರು. ಮಾತೆ ಮಹಾದೇವಿಯವರ ಹೇಳಿಕೆ ಹಾಗೂ ಅವರ ಅನುಯಾಯಿಗಳ ಕೃತ್ಯ ಖಂಡಿಸಿ, ಪ್ರತಿಭಟನೆ ನಡೆಸಿದ್ದೂ, ವೀರಶೈವ ಲಿಂಗಾಯತ ಸಮುದಾಯದಲ್ಲಿ ಒಡಕು ಮೂಡಿಸುತ್ತಿರುವುದು ಸರಿಯಲ್ಲ  ಎಂದು ಪ್ರತಿಭಟನಾ ನಿರತ ಮುಖಂಡರು ಹೇಳಿದ್ದಾರೆ. ಇನ್ನು ಪ್ರತಿಭಟನಾ ವೇಳೆ ಮಾತೆ ಮಹಾದೇವಿ ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ