ಭೀಕರ ರಸ್ತೆ ಅಪಘಾತ ಮೂವರ ದುರ್ಮರಣ !

Kannada News

04-08-2017

ಕೋಲಾರ: ಕೋಲಾರದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಮೂವರು ಬಲಿಯಾಗಿದ್ದಾರೆ, ಕೆ.ಎಸ್.ಆರ್.ಟಿ.ಸಿ ಬಸ್ ಗೆ ಐ20 ಕಾರ್ ಡಿಕ್ಕಿಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ. ಕೋಲಾರ ತಾಲ್ಲೂಕು ರಾಷ್ಟ್ರೀಯ ಹೆದ್ದಾರಿ ೭೫ರ  ಮಡೇರಹಳ್ಳಿ ಬಳಿ ಘಟನೆ ನಡೆದಿದೆ. ಬೆಂಗಳೂರು ಕಡೆಯಿಂದ ಕೋಲಾರಕ್ಕೆ ಬರುತ್ತಿದ್ದ ಕಾರ್ ಡಿವೈಡರ್ ಡಿಕ್ಕಿ ಹೊಡೆದು ಪಲ್ಟಿಯಾಗಿ ಎದುರಿನ ರಸ್ತೆಯಲ್ಲಿ ಬರುತ್ತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ. ಕಾರ್ ನಲ್ಲಿದ್ದ ಕೋಲಾರ ಮೂಲದ ಶ್ರೀಹರಿ(೨೩), ರೋಹನ್ (೨೨), ಸುಭಾಷ್ (೨೧) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಶ್ವಾಸ್ ಹಾಗೂ ಕಾರ್ತಿಕ್ ನ ಸ್ಥಿತಿ ಗಂಭೀರವಾಗಿದ್ದೂ, ಗಾಯಾಳುಗಳನ್ನು, ಕೋಲಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ  ಕಾರು ಸಂಪೂರ್ಣ ಜಖಂ ಗೊಂಡಿದೆ. ಬಸ್ ನಲ್ಲಿದ್ದವರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಮೃತ ರೆಲ್ಲರೂ ಕೋಲಾರ ನಗರದ ಜ್ಯುವೆಲ್ಲರಿ ಅಂಗಡಿ ಮಾಲೀಕರ ಮಕ್ಕಳು ಎಂದು ತಿಳಿದು ಬಂದಿದೆ.  ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಮೃತ ದೇಹಗಳನ್ನು ಆರ್.ಎಲ್ ಜಾಲಪ್ಪಾ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಿದ್ದಾರೆ. ಇನ್ನು ರಸ್ತೆಯಲ್ಲಿದ್ದ ವಾಹನವನ್ನು ತೆರವು ಗೊಳಿಸಿದ್ದೂ, ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ