ದೇಶಾದ್ಯಂತ ರಾಷ್ಟ್ರೀಯ ಹೆದ್ದಾರಿ ಬಂದ್..?

Kannada News

04-08-2017

ಮೈಸೂರು: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 9ರಂದು ದೇಶಾದ್ಯಂತ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳ ಬಂದ್ ಚಳುವಳಿ ನಡೆಸಲಾಗುವುದು ಎಂದು, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ, ಕುರುಬೂರು ಶಾಂತಕುಮಾರ್ ಮೈಸೂರಿನಲ್ಲಿ ಹೇಳಿದ್ದಾರೆ. ಅಷ್ಟೇ ಅಲ್ಲದೇ ರೈತರ ಕೃಷಿ ಸಾಲಮನ್ನಾ ಪ್ರಮಾಣ ಹೆಚ್ಚಿಸಬೇಕು ಮತ್ತು, ಡಾ.ಸ್ವಾಮಿನಾಥನ್ ಅವರ ವರದಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯದ ಪ್ರಮುಖ ಜಲಾಶಯಗಳಿಂದ ಅಚ್ಚುಕಟ್ಟು ಭಾಗದ ಕೆರೆಗಳಿಗೆ ನೀರು ತುಂಬಿಸಬೇಕು, ಮಹದಾಯಿ ನದಿ ನೀರಿನ ಯೋಜನೆ ಆರಂಭಕ್ಕೆ ತಕ್ಷಣ ಕೈಗೊಳ್ಳಬೇಕೆಂದು ಒತ್ತಾಯಿಸಿ ಹೆದ್ದಾರಿ ಬಂದ್ ಚಳುವಳಿ ನೆಡೆಸಲಿದ್ದೇವೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಕಿಸಾನ್ ಮಹಾಸಂಘದ ವತಿಯಿಂದ ಕರೆ ನೀಡಿರುವ ಹೆದ್ದಾರಿ ಬಂದ್ ಚಳುವಳಿಯಲ್ಲಿ ದೇಶಾದ್ಯಂತ 153ಕ್ಕೂ ಹೆಚ್ಚು ಸಂಘಟನೆಗಳು ಭಾಗಿಯಾಗಲಿವೆ. ಅಂದಿನ ಹೆದ್ದಾರಿ ಬಂದ್ ಚಳುವಳಿಯನ್ನು ಸರ್ಕಾರ ಪೊಲೀಸ್ ಬಲ ಪ್ರಯೋಗದ ಮೂಲಕ ಹತ್ತಿಕ್ಕಲು ಯತ್ನಿಸಿದರೆ, ಜೈಲು ಭರೋ ಮಾಡಲು ಚಿಂತಿಸಲಾಗಿದೆ ಎಂದು ಹೇಳಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ