ಡ್ರಾಪ್ ಕೊಡುವ ನೆಪದಲ್ಲಿ ಸುಲಿಗೆ !

Kannada News

04-08-2017

ಬೆಂಗಳೂರು: ಬಸ್‍ಗಾಗಿ ಕಾಯುತ್ತಿದ್ದ ಯುವಕನೊಬ್ಬನನ್ನು ಡ್ರಾಪ್ ಕೊಡುವ ನೆಪದಲ್ಲಿ ಕಾರಿನಲ್ಲಿ ಹತ್ತಿಸಿಕೊಂಡ ದುಷ್ಕರ್ಮಿಗಳು ಚಾಕು ತೋರಿಸಿ ಬೆದರಿಸಿ 2 ಸಾವಿರ ನಗದು ಕಸಿದು ಪರಾರಿಯಾಗಿರುವ ದುರ್ಘಟನೆ ಆರ್.ಎಂ.ಸಿ.ಯಾರ್ಡ್  ಬಳಿ ನಡೆದಿದೆ. ಗೊರಗುಂಟೆ ಪಾಳ್ಯದ ಸಿಗ್ನಲ್ ಬಳಿ ರಾತ್ರಿ 11ರ ವೇಳೆ ತುಮಕೂರಿಗೆ ಹೋಗಲು ಬಸ್‍ ಗಾಗಿ ಕಾಯುತ್ತಾ ನಿಂತಿದ್ದ ರಾಜು ಎಂಬ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರನ್ನು ಡ್ರಾಪ್ ಕೊಡುವ ನೆಪದಲ್ಲಿ ಇಂಡಿಕಾ ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಹತ್ತಿಸಿಕೊಂಡಿದ್ದಾರೆ.

ಸ್ವಲ್ಪ ದೂರ ಹೋದ ನಂತರ ರಾಜುಗೆ ಚಾಕುವಿನಿಂದ ಬೆದರಿಸಿ 2 ಸಾವಿರ ನಗದು ದೋಚಿ ಕಾರಿನಿಂದ ಕೆಳಗಿಳಿಸಿ ಪರಾರಿಯಾಗಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಆರ್.ಎಂ.ಸಿ.ಯಾರ್ಡ್  ಬಳಿ ಬಸ್ ಗಾಗಿ ಕಾಯುತ್ತ ನಿಂತಿದ್ದ ಯುವಕನೊಬ್ಬನನ್ನು ಇದೇ ರೀತಿ ಡ್ರಾಪ್ ಕೊಡುವ ನೆಪದಲ್ಲಿ ದುಷ್ಕರ್ಮಿಗಳು ಸುಲಿಗೆ ಮಾಡಿದ್ದರು. ಪ್ರಕರಣ ದಾಖಲಿಸಿರುವ ಆರ್.ಎಂ.ಸಿ.ಯಾರ್ಡ್  ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ