ಮರಣ ದೃಢೀಕರಣ ಪತ್ರಕ್ಕೂ ಆಧಾರ್ !

Kannada News

05-08-2017

ನವದೆಹಲಿ: ಮರಣ ದೃಢೀಕರಣ ಪತ್ರಕ್ಕೂ ಆಧಾರ್ ಕಡ್ಡಾಯಗೊಳಿಸಲಾಗಿದೆ. ಅಕ್ಟೋಬರ್ 1 ರಿಂದಲೇ ಈ ನಿಯಮ ಜಾರಿಯಾಗಲಿದೆ ಎನ್ನಲಾಗಿತ್ತಾದರೂ, ಮರಣ ಪ್ರಮಾಣ ಪತ್ರಕ್ಕೆ ಆಧಾರ್ ಕಡ್ಡಾಯವಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಗುರುತಿನ ವಂಚನೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮರಣ ನೋಂದಣಿಗೂ ಆಧಾರ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದು, ಅಕ್ಟೋಬರ್ 1 ರಿಂದ ಈ ನಿಯಮ ಜಾರಿಗೆ ಬರಲಿದೆ ಎನ್ನಲಾಗಿತ್ತು. ಮರಣ ಪ್ರಮಾಣ ಪತ್ರ ಪಡೆಯಲು ಆಧಾರ್ ಕಡ್ಡಾಯವಲ್ಲ. ಮರಣದ ನೋಂದಣಿ ಮಾಡುವಾಗ, ಮೃತ ವ್ಯಕ್ತಿಯ ವಿವರಗಳನ್ನು ನೀಡಬೇಕಿದೆ ಎಂದು ಹೇಳಲಾಗಿದೆ. ಕೇಂದ್ರ ಗೃಹ ಇಲಾಖೆ ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳನ್ನು ಹೊರತುಪಡಿಸಿ ಅಕ್ಟೋಬರ್ 1 ರಿಂದ ಎಲ್ಲಾ ರಾಜ್ಯಗಳಲ್ಲೂ ನಿಯಮ ಅನ್ವಯವಾಗಲಿದೆ ಎನ್ನಲಾಗುತ್ತಿದೆ.. ಜಮ್ಮು-ಕಾಶ್ಮೀರ, ಅಸ್ಸಾಂ, ಮೇಘಾಲಯ ರಾಜ್ಯಗಳಿಗೆ ಪ್ರತ್ಯೇಕ ದಿನಾಂಕ ಘೋಷಣೆ ಮಾಡಲಾಗುತ್ತದೆ ಎಂದು ಗೃಹ ಇಲಾಖೆ ತಿಳಿಸಿದೆ.

 

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ