ಗಾಂಧಿವಾದಿ ಸುರೇಂದ್ರ ಕೌಲಗಿ ವಿಧಿವಶ !

Kannada News

07-08-2017

ಮಂಡ್ಯ: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ, ಹಿರಿಯ ಗಾಂಧಿವಾದಿ ಸುರೇಂದ್ರ ಕೌಲಗಿ(84) ನಿಧನರಾಗಿದ್ದಾರೆ. ನಿನ್ನೆ ರಾತ್ರಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಮೂಲತಃ ಧಾರವಾಡ ಜಿಲ್ಲೆ ಗುಡಿಗೇರಿ ಗ್ರಾಮದವರಾದ ಸುರೇಂದ್ರ ಕೌಲಗಿ ಅವರು, ಮಂಡ್ಯ ಜಿಲ್ಲೆ ಮೇಲುಕೋಟೆಯಲ್ಲಿ ಜನಪದ ಸೇವಾ ಟ್ರಸ್ಟ್ ಸ್ಥಾಪಿಸಿ ಸಮಾಜ ಸೇವೆ ಮಾಡುತ್ತಿದ್ದರು. ಅಲ್ಲದೇ ಆಚಾರ್ಯ ವಿನೋಬಾ ಭಾವೆ ಅವರ ಜೊತೆ ಕೆಲಸ ಮಾಡಿದ್ದ ಹೆಗ್ಗಳಿಕೆ ಕೌಲಗಿ ಅವರದು. 2013ರಲ್ಲಿ ದಾಸಿಮಯ್ಯ ಪ್ರಶಸ್ತಿ, 2014ರಲ್ಲಿ ರಾಷ್ಟ್ರಮಟ್ಟದ ಜಮ್ನಾಲಾಲ್ ಬಜಾಜ್ ಪ್ರಶಸ್ತಿಗೆ ಭಾಜನರಾಗಿದ್ದರು. ಖಾದಿಯನ್ನು ಜನಪ್ರಿಯಗೊಳಿಸಲು ಸುರೇಂದ್ರ ಕೌಲಗಿ ಶ್ರಮಿಸಿದ್ದರು. ಇನ್ನು ಇಂದು ಮೇಲುಕೋಟೆಯಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದ್ದೂ,  ಅಗಲಿದ ಹಿರಿಯ ಚೇತನಕ್ಕೆ ಗಣ್ಯರು ಸಂತಾಪ ಸೂಚಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ