ಗುಜರಾತ್ ಶಾಸಕರು ದೆಹಲಿಗೆ ಪ್ರಯಾಣ !

Kannada News

07-08-2017

ರಾಮನಗರ: ಕೆಳೆದ ಕೆಲ ದಿನಗಳಿಂದ ರಾಜಕೀಯ ಚಟುವಟಿಕೆಗಳ ಕೇಂದ್ರವಾಗಿದ್ದ ಈಗಲ್ ಟನ್ ರೆಸಾರ್ಟ್ ಹಾಗೂ ಅಲ್ಲಿ ವಾಸ್ತವ್ಯ ಹೂಡಿದ್ದ, ಗುಜರಾತ್ ನ ಕಾಂಗ್ರೆಸ್ ಶಾಸಕರು, ಇಂದು ಅಲ್ಲಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎರಡು ಐರಾವತ ಬಸ್ ಗಳಲ್ಲಿ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೊರಟ ಅವರು, ಅಲ್ಲಿಂದ ದೆಹಲಿಗೆ ತೆರಳಲಿದ್ದಾರೆ. 44 ಮಂದಿ ಶಾಸಕರೊಂದಿಗೆ ಇಂಧನ ಸಚಿವ ಡಿ.ಕೆ‌.ಶಿವಕುಮಾರ್ ಕೂಡ ಜೊತೆಯಾಗಿದ್ದಾರೆ. ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ, ತದನಂತರ ನಾಳೆ ಗುಜರಾತ್ ಗೆ ಮರಳಲಿದ್ದಾರೆ. ಸತತ 9 ದಿನಗಳಿಂದ ಈಗಲ್ ಟನ್ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದ ಗುಜರಾತ್ ಕಾಂಗ್ರೆಸ್ ಶಾಸಕರು ಇದೀಗ ದೆಹಲಿಗೆ ಹೊರಟಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ