ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಚಾಲಕರ ಸಾವು !

Kannada News

07-08-2017 509

ಚಿತ್ರದುರ್ಗ: ನಿಂತಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರೂ, ಚಾಲಕರು ಸಾವನ್ನಪ್ಪಿದ್ದಾರೆ. ಅಲ್ಲದೇ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಘಟನೆಯು ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲ್ಲೂಕಿನ ಬಿ.ಜಿ ಕೆರೆ ಸಮೀಪದ, ಹೊಸಕೆರೆ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ಲಾರಿ ಹಾಗೂ ಬಸ್ ನ ಇಬ್ಬರೂ ಚಾಲಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಬಳ್ಳಾರಿ, ಚಿತ್ರದುರ್ಗದು ಚಳ್ಳಕೆರೆ ಆಸ್ಪತ್ರೆಗೆ ರವಾನಿಸಿದ್ದೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ