ಉಪನ್ಯಾಸಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ !

Kannada News

07-08-2017

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರೂರಾದ, ಮೈಸೂರು ಜಿಲ್ಲೆಯಲ್ಲೇ ಕಾಲೇಜು ಉಪನ್ಯಾಸಕರ ಕೊರತೆ ಕಂಡುಬಂದಿದ್ದೂ, ಉಪನ್ಯಾಸಕರ ಕೊರತೆ ನೀಗಿಸುವಂತೆ ಒತ್ತಾಯಿಸಿ, ಮೈಸೂರಿನ ಮಹಾರಾಜ ಪದವಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್ ನ ನೇತೃತ್ವದಲ್ಲಿ, ಮೈಸೂರು ವಿಶ್ವ ವಿದ್ಯಾಲಯ ಕಾರ್ಯಸೌಧದ ಮುಂಭಾಗದಲ್ಲಿಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು, ಕಾಲೇಜಿಗೆ ಉಪನ್ಯಾಸಕರನ್ನು ನೇಮಿಸುವಂತೆ ಆಗ್ರಹಿಸಿ ಘೋಷಣೆಗಳನ್ನು ಕೂಗಿದ್ದಾರೆ, ಅಲ್ಲದೇ ಉಪನ್ಯಾಸಕರಿಲ್ಲದೇ ವಿದ್ಯಾರ್ಥಿಗಳು ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದೂ, ಕೂಡಲೆ ಈ ಕುರಿತು ಕ್ರಮ ಕೈಗೊಳ್ಳುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.  ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ