ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ !

Kannada News

08-08-2017

ವಿಜಯಪುರ: ಮಾನಸಿಕ ಅಸ್ವಸ್ಥೆಯಾಗಿದ್ದ, ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ವಿಜಯಪುರದಲ್ಲಿ ಬೆಳಕಿಗೆ ಬಂದಿದೆ. ವಿಜಯಪುರದ ಸಿಂದಗಿ ತಾಲ್ಲೂಕಿನ ಆಸಂಗಿಹಾಳ ಗ್ರಾಮದಲ್ಲಿ ಘಟನೆ ಸಂಭವಿಸಿದ್ದೂ, ಚಾಂದ್ ಪಟೇಲ (45) ಎಂಬ ವ್ಯಕ್ತಿ, ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ ಕಾಮುಕ. 17 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಚಾಂದ್ ಪಟೇಲ ಪರಾರಿಯಾಗಿದ್ದಾನೆ. ಘಟನೆ ತಿಳಿದು ಸ್ಥಳಕ್ಕಾಗಮಿಸಿದ ತಾಲ್ಲೂಕಿನ, ಆಲಮೇಲ ಠಾಣಾ ಪೊಲೀಸರು ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನುಕಾಮುಕ ಚಾಂದ್ ಪಟೇಲ್ ಗಾಗಿ ಶೋಧ ಕಾರ್ಯ ನಡೆಸಿದ್ದಾರೆ.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ