ನಿಯಂತ್ರಣ ತಪ್ಪಿ ಬೈಕ್ ಸವಾರ ಸಾವು !

Kannada News

09-08-2017

ಮಂಡ್ಯ: ಬೈಕ್‌ ನಲ್ಲಿ ಹೋಗುತ್ತಿದ್ದಾಗ, ನಿಯಂತ್ರಣ ತಪ್ಪಿ ಬಿದ್ದ ಬೈಕ್‌ ಸವಾರ ಮತ್ತು ಹಿಂದೆ ಕುಳಿತಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಶಿವಕುಮಾರ್ (28), ಶಾಂತ ಕುಮಾರ್(30) ಮೃತ ದುರ್ದೈವಿಗಳು. ಮಂಡ್ಯ ತಾಲ್ಲೂಕಿನ ಕೆರಗೋಡು ಸಮೀಪ ಘಟನೆ ಸಂಭವಿಸಿದೆ. ಬೈಕ್‌ ನಲ್ಲಿ ಹೋಗುವಾಗ ನಿಯಂತ್ರಣ ತಪ್ಪಿ ಬಿದ್ದ ಸವಾರರು, ಬಿದ್ದ ರಭಸಕ್ಕೆ ತೀವ್ರ ಗಾಯಗೊಂಡಿದ್ದರು, ಇವರನ್ನು ಆಸ್ಪತ್ರೆಗೆ ರವಾನಿಸುವ ಮಾರ್ಗದ ಮಧ್ಯೆಯೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕೆರಗೋಡು ಪೊಲೀಸರು ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದೂ ಮುಂದಿನ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ