ಖತರ್ನಾಕ್ ಮನೆಗಳ್ಳನ ಬಂಧನ !

Kannada News

09-08-2017

ಹುಬ್ಬಳ್ಳಿ: ಹಾಡು ಹಗಲೇ ಮನೆಕಳ್ಳತನ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯೂ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಪನಗರ ಠಾಣೆ ಪೊಲೀಸರ ಕಾರ್ಯಾಚರಣೆ ನಡೆಸಿ, ಆರೋಪಿ ಪ್ರಕಾಶ್ ಪಾಟೀಲ ಎಂಬುವರನ್ನು ಬಂಧಿಸಿದ್ದಾರೆ. ಕಳೆದ ಕೆಲ ದಿನಗಳಿಂದ ನಗರದಲ್ಲಿ ಹಾಡು ಹಗಲೇ ಮನೆಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದಾರೆ. ಪ್ರಕಾಶ್ ಪಾಟೀಲ್ ಮೂಲತಃ ಶಹಪುರದ ನಿವಾಸಿ ಎಂದು ತಿಳಿದು ಬಂದಿದೆ. ಬಂಧಿತನಿಂದ ಒಂದು ರಿವಾಲ್ವಾರ್ ಹಾಗೂ 800 ಗ್ರಾಂ ಚಿನ್ನ, ಒಂದೂವರೆ ಸಾವಿರ ಬೆಳ್ಳಿ, ಸೇರಿದಂತೆ ಕೆಲ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯ ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದೂ, ಆರೋಪಿಯನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ