ಸ್ಟೇಟ್ ಬ್ಯಾಂಕ್ ವಿರುದ್ಧ ಕರವೇ ಪ್ರತಿಭಟನೆ !

Kannada News

09-08-2017

ಬೆಂಗಳೂರು: ಕನ್ನಡ ಬಳಸದೆ, ಕನ್ನಡಿಗರಿಗೆ ಉದ್ಯೋಗ ನೀಡದ, ಹಿಂದಿ ಮತ್ತು ಹಿಂದಿ ಭಾಷಿಕರಿಗೆ ಆದ್ಯತೆ ನೀಡುತ್ತಿರುವ, ಭಾರತೀಯ ಸ್ಟೇಟ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ, ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ಸೇಂಟ್ ಮಾರ್ಕ್ಸ್ ರಸ್ತೆಯ, ಸ್ಟೇಟ್ ಬ್ಯಾಂಕ್ ಪ್ರಧಾನ ಕಚೇರಿ ಮುಂಭಾಗದಲ್ಲಿ, ಕರ್ನಾಟಕ ರಕ್ಷಣಾ ವೇದಿಕೆಯ,ರಾಜ್ಯಾಧ್ಯಕ್ಷ  ನಾರಾಯಣಗೌಡರ ನೇತೃತ್ವದಲ್ಲಿ ಭಾರೀ ಪ್ರತಿಭಟನೆ ನಡೆಸಿದ್ದೂ, ಸ್ಟೇಟ್  ಬ್ಯಾಂಕ್ ಆಫ್  ಇಂಡಿಯಾದ ಕರ್ನಾಟಕ ಶಾಖೆಗಳಲ್ಲಿ, ಕನ್ನಡದಲ್ಲಿ ಕಡ್ಡಾಯವಾಗಿ ಸೇವೆ ಕಲ್ಪಿಸಬೇಕು. ಕನ್ನಡ ತಿಳಿದಿರುವ ಸಿಬ್ಬಂದಿಯನ್ನು ನೇಮಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಮೊನ್ನೆಯಷ್ಟೇ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ.ಎಸ್.ಜಿ ಸಿದ್ದರಾಮಯ್ಯ ನವರು ಬ್ಯಾಂಕ್ ನೇಮಕಾತಿಯಲ್ಲಿ ಸ್ಥಳೀಯ ಭಾಷಿಕರಿಗೆ ಆದ್ಯತೆ ಮತ್ತು ಬ್ಯಾಂಕ್ ಗಳಲ್ಲಿ ಸ್ಥಳೀಯ ಭಾಷೆಗೆ ಪ್ರಾಮುಖ್ಯತೆ ನೀಡಬೇಕೆಂದು, ರಾಷ್ಟ್ರೀಕೃತ ಹಾಗೂ ಖಾಸಗಿ ಬ್ಯಾಂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ಅನ್ಯಭಾಷಿಕ ಅಧಿಕಾರಿಗಳು ಆರು ತಿಂಗಳ ಒಳಗಾಗಿ ಕನ್ನಡ ಕಲಿಯಬೇಕು. ಇಲ್ಲದಿದ್ದರೆ ಅವರನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಬೇಕು ಎಂದು ಸೂಚಿಸಿದ್ದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ