ಪತ್ನಿ ಜೈಲುಪಾಲು: ಬೆಂಕಿ ಹಚ್ಚಿಕೊಂಡ ಪತಿ !

Kannada News

09-08-2017

ಮೈಸೂರು: ಕಳವು ಪ್ರಕರಣದಲ್ಲಿ ಪತ್ನಿ ಜೈಲು ಸೇರಿದ್ದರಿಂದ, ಬೇಸತ್ತ ಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೈಸೂರಿನಲ್ಲಿ ನಡೆದಿದೆ. ಮಂಜುನಾಥ್ (55) ಮೃತ ದುರ್ದೈವಿ. ಮೈಸೂರಿನ ಶಾರದಾದೇವಿ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆ ಕೆಲಸ ಮಾಡುತ್ತಿದ್ದ ಮಂಜುನಾಥ್ ಅವರ ಪತ್ನಿ ಶುಭ ಎಂಬುವರು, ಕಳುವು ಪ್ರಕರಣದಲ್ಲಿ ಇತ್ತೀಚೆಗೆ ಜೈಲು ಸೇರಿದ್ದಳು. ಇದರಿಂದ ಬೇಸತ್ತ ಮಂಜುನಾಥ್, ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಇದರಿಂದ ತೀವ್ರ ಸುಟ್ಟಗಾಯಗಳಾಗಿ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿಸಿದ್ದಾರೆ. ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ